ಕಾರು ಕೊಳ್ಳುವವರಿಗೆ ಸರಿಯಾದ ಸಮಯ, ಭಾರಿ ಡಿಸ್ಕೌಂಟ್ - ಯಾವ ಕಾರಿಗೆ ಎಷ್ಟು ಡಿಸ್ಕೌಂಟ್ ಗೊತ್ತಾ ?

ಕಾರು ಕೊಳ್ಳಬೇಕೆಂಬ ಆಸೆ ಎಲ್ಲರಲ್ಲೂ ಇರುತ್ತದೆ ಆದರೆ ಕೈಗೆಟುಕುವ ದರಕ್ಕಿಂತ ಜಾಸ್ತಿ ಇರುತ್ತದೆ ಎಂಬ ಭಾವನೆಯಿಂದ ಕಾರ್ ಖರೀದಿ ಮುಂದೂಡುತ್ತಿರುವವರು ಈಗ ಕೊಂಡುಕೊಳ್ಳಲು ಸರಿಯಾದ ಸಮಯ. ದೇಶದ ನಂ.1 ವಾಹನ ಉತ್ಪಾದನಾ ಕಂಪನಿಯಾದ ಮಾರುತಿ ಸುಜುಕಿ 30,000ದಿಂದ 1.2 ಲಕ್ಷ ರು.ತನಕ ಮುಖ ಬೆಲೆಯ ಮೇಲೆ ಕಡಿತಗೊಳಿಸಿ ಮಾರಾಟಕ್ಕೆ ಮುಂದಾಗಿದೆ. ಆಲ್ಟೋ ಎಂಟ್ರಿ ಮಾಡೆಲ್‌ಗಳ ಬೆಲೆಯನ್ನೇ 18-20% ಕಡಿತಗೊಳಿಸಿದೆ. ಅದೇ ಪ್ರಕಾರ ಹ್ಯುಂಡೈ ಕೂಡ ಗ್ರಾಂಡ್‌ ಐ10 ಕಾರಿನ ಮೇಲೆ ಶೇ.15ರಷ್ಟುಆಫರ್‌ ನೀಡುತ್ತಿದೆ. ಹೋಂಡಾ 42,000ದಿಂದ 4,00,000ದಷ್ಟುಕಡಿತಗೊಳಿಸಿದ್ದು, ಸಿಆರ್‌ವಿ ಮತ್ತು ಬಿಆರ್‌ವಿ ಕಾರುಗಳನ್ನು ಭಾರಿ ರಿಯಾಯ್ತಿ ದರದಲ್ಲಿ ಮಾರಾಟಕ್ಕೆ ಮುಂದಾಗಿದೆ.

ಯಾವ ಕಾರುಗಳು ಬೆಲೆಯಲ್ಲಿ ಕಡಿತ?

ಸದ್ಯಕ್ಕೆ ಕಂಪನಿಗಳು ಘೋಷಿಸಿಕೊಂಡಿರುವ ಪ್ರಕಾರ ಹೋಂಡಾ ಸಿಆರ್‌ವಿ, ಬಿಆರ್‌ವಿ ಕಾರುಗಳ ಮೇಲೆ ಕ್ರಮವಾಗಿ 4 ಲಕ್ಷ ಮತ್ತು 1.10 ಲಕ್ಷ ರು. ಕಡಿತಗೊಳಿಸಲಾಗಿದೆ. ಟೊಯೊಟಾ ಯಾರೀಸ್‌ ಸೆಡಾನ್‌ ಕಾರಿನ ಮೇಲೆ 2.50 ಲಕ್ಷ ರು. ಕಡಿತಗೊಳಿಸಲಾಗಿದೆ. ಹ್ಯೂಂಡೈ ಗ್ರಾಂಡ್‌ ಐ10 ಮತ್ತು ಸ್ಯಾಂಟ್ರೋ ಕಾರಿನ ಮೇಲೆ ಕ್ರಮವಾಗಿ 85 ಸಾವಿರ ಮತ್ತು 40 ಸಾವಿರ ಕಡಿತಗೊಳಿಸಲಾಗಿದೆ. ಮಾರುತು ಸುಝುಕಿ ಕಾರುಗಳಾದ ಎಸ್‌.ಕ್ರಾಸ್‌ ಮೇಲೆ 1.12 ಲಕ್ಷ ರು, ವಿತಾರಾ ಬ್ರೆಝಾ ಮೇಲೆ 1.01 ಲಕ್ಷ ರು. ಕಡಿತಗೊಳಿಸಲಾಗಿದೆ.

ಪ್ರ'ಧಾನಿ ಮೋ'ದಿಯವರಿಗೆ ಮತ್ತು ಮುಖ್ಯ'ಮಂತ್ರಿ ಯಡಿ'ಯೂರಪ್ಪನವರಿಗೆ ಕಾಂಗ್ರೆಸ್ ಪಕ್ಷ'ದಿಂದ ಪ್ರಶ್ನೆಗಳ ಸುರಿ'ಮಳೆ!

ಬಿಜೆಪಿಯ ಕನಸು ಭಗ್ನಗೊಳಿಸಿದ ಕಾಂಗ್ರೆಸ್, ಆಪರೇಷನ್ ಕಾಂಗ್ರೆಸ್ ಸಕ್ಸಸ್ !

ಎಚ್ ಡಿ ರೇವಣ್ಣ ರಾಜಕೀಯ ಭವಿಷ್ಯಕ್ಕೆ ಕಂಟಕವಾಗುವ ಸಾಧ್ಯತೆ !

ಮತಾಂತರಕ್ಕೆ ಬ್ರೇಕ್ ಹಾಕಿದ ಕೇಂದ್ರ ಸರ್ಕಾರ, ಹೊಸ ನೀತಿ ಜಾರಿಗೆ !