ಪಾ'ಕ್ ಪ್ರಧಾನಿಗೆ ಶಾ'ಕ್ ಕೊಟ್ಟ ಶಾಸಕ, ಪಾ'ಕ್ ಸಹವಾಸವೇ ಬೇಡ ಎಂದು ಭಾರತಕ್ಕೆ ಬಂದ!

ಬಲದೇವ್ ಸಿಂಗ್ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅವರ ತೆಹ್ರಿಕ್-ಇ-ಇನ್ಸಾಫ್ ಪಕ್ಷದ ಅಲ್ಪ ಸಂಖ್ಯಾತ ಸಮುದಾಯದ ಶಾಸಕ. ಬ್ಯಾರಿಕೋಟ್ ಜಿಲ್ಲೆಯ ಮೀಸಲು ಕ್ಷೇತ್ರವಾದ ಖೈಬರ್ ಫಖ್ತುನ್ ಖ್ವಾ ವಿಧಾನಸಭಾ ಕ್ಷೇತ್ರದಿಂದ ಇವರು ಶಾಸಕನಾಗಿ ಆಯ್ಕೆಯಾಗಿದ್ದರು.
ಪಾಕಿಸ್ತಾನದಲ್ಲಿ ಅಲ್ಪ ಸಂಖ್ಯಾತರಿಗೆ ರಕ್ಷಣೆ ಇಲ್ಲ ಎಂದು ಆರೋಪಿಸಿರುವ ಅಲ್ಲಿನ ಸಿಖ್ ಸಮುದಾಯದ ಶಾಸಕ ಬಲದೇವ್ ಸಿಂಗ್ ಇದೀಗ ಕುಟುಂಬ ಸಮೇತರಾಗಿ ಭಾರತಕ್ಕೆ ತಲುಪಿದ್ದು, ಇಲ್ಲೇ ಆಶ್ರಯ ಪಡೆಯಲು ಮುಂದಾಗಿರುವ ವಿಚಾರ ಪಾಕಿಸ್ತಾನ ಸರ್ಕಾರಕ್ಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮುಜುಗರಕ್ಕೀಡು ಮಾಡುವಂತಾಗಿದೆ.

ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತರಿಗೆ ಸುರಕ್ಷಿತವಾದ ದೇಶವಲ್ಲವೆಂದು ವಿಶ್ವ ಸಂಸ್ಥೆಯಲ್ಲಿ ಈಗಾಗಲೇ ಪ್ರಕರಣಗಳು ದಾಖಲಾಗಿವೆ.

ಸೋಮವಾರ ಕುಟುಂಬ ಸಮೇತರಾಗಿ ಭಾರತಕ್ಕೆ ಆಗಮಿಸಿರುವ ಬಲದೇವ್ ಸಿಂಗ್ ತಾನು ಮತ್ತೆ ಪಾಕಿಸ್ತಾನಕ್ಕೆ ಹಿಂದಿರುಗಲಾರೆ ಎಂದು ತಿಳಿಸಿದ್ದಾರೆ. ಈ ಕುರಿತು ಮಾಧ್ಯಮಗಳೆದುರು ಮಾತನಾಡಿರುವ ಅವರು, “ಪಾಕಿಸ್ತಾನದಲ್ಲಿ ಅಲ್ಪ ಸಂಖ್ಯಾತ ಸಮುದಾಯದವರನ್ನು ಹೀನಾಯವಾಗಿ ನಡೆಸಿಕೊಳ್ಳಲಾಗುತ್ತಿದೆ. ಹಿಂದೂಗಳು ಮತ್ತು ಸಿಖ್ಖರನ್ನು ಪ್ರತಿದಿನ ಕೊಲ್ಲಲಾಗುತ್ತಿದೆ.

2016ರಲ್ಲಿ ನನ್ನದೇ ಕ್ಷೇತ್ರದ ಅಲ್ಪಸಂಖ್ಯಾತ ಸಮುದಾಯದ ಸಂಸದನನನ್ನು ಕೊಲ್ಲಲಾಗಿತ್ತು. ಆದರೆ, ಕೊಲೆ ಆರೋಪಿಗಳ ವಿರುದ್ಧ ಸುಳ್ಳು ಪ್ರಕರಣಗಳನ್ನು ಹೊರಿಸಿ 2018ರಲ್ಲಿ ಖುಲಾಸೆಗೊಳಿಸಲಾಗಿತ್ತು. ಪಾಕಿಸ್ತಾನ ಅಲ್ಪ ಸಂಖ್ಯಾತರಿಗೆ ಸೂಕ್ತ ದೇಶವಲ್ಲ. ಹೀಗಾಗಿ ನಾನು ಭಾರತಲ್ಲೇ ಆಶ್ರಯ ಪಡೆಯುವ ಉದ್ದೇಶದಿಂದ ಬಂದಿದ್ದೇನೆ” ಎಂದು ಸ್ಪಷ್ಟಪಡಿಸಿದ್ದಾರೆ.

ಜಮ್ಮು-ಕಾಶ್ಮೀರಕ್ಕೆ ಕಲಂ 370ರ ಅಡಿಯಲ್ಲಿ ಭಾರತ ಸರ್ಕಾರ ನೀಡುತ್ತಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಪಾಕಿಸ್ತಾನ ಸರ್ಕಾರ ಭಾರತದ ವಿರುದ್ಧ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೋರಾಟಕ್ಕಿಳಿದಿದೆ. ಅಲ್ಲದೆ, ಇತ್ತೀಚೆಗೆ ಹೇಳಿಕೆ ನೀಡಿದ್ದ ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ “ಭಾರತದಲ್ಲಿ ಅಲ್ಪ ಸಂಖ್ಯಾತ ಸಮುದಾಯದವರಿಗೆ ರಕ್ಷಣೆ ಇಲ್ಲ. ಮುಸ್ಲೀಮರನ್ನು ಗುರಿಯಾಗಿರಿಸಿಕೊಂಡು ಹಿಂದೂಸ್ತಾನದಲ್ಲಿ ದಾಳಿ ನಡೆಸಲಾಗುತ್ತಿದೆ” ಎಂದು ಆರೋಪಿಸಿದ್ದರು.

ಆದರೆ, ಇದೀಗ ಅವರ ಆರೋಪದ ಬೆನ್ನಿಗೆ ಸ್ವತಃ ಅವರದೇ ಪಕ್ಷದ ಶಾಸಕ ಪಾಕಿಸ್ತಾನದಲ್ಲಿ ಅಲ್ಪ ಸಂಖ್ಯಾತ ಸಮುದಾಯದ ಜನರಿಗೆ ರಕ್ಷಣೆ ಇಲ್ಲ ಎಂದು ಭಾರತವನ್ನು ಆಶ್ರಯಿಸಿರುವುದು ಪಾಕಿಸ್ತಾನಕ್ಕೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.

ಪ್ರ'ಧಾನಿ ಮೋ'ದಿಯವರಿಗೆ ಮತ್ತು ಮುಖ್ಯ'ಮಂತ್ರಿ ಯಡಿ'ಯೂರಪ್ಪನವರಿಗೆ ಕಾಂಗ್ರೆಸ್ ಪಕ್ಷ'ದಿಂದ ಪ್ರಶ್ನೆಗಳ ಸುರಿ'ಮಳೆ!

ಬಿಜೆಪಿಯ ಕನಸು ಭಗ್ನಗೊಳಿಸಿದ ಕಾಂಗ್ರೆಸ್, ಆಪರೇಷನ್ ಕಾಂಗ್ರೆಸ್ ಸಕ್ಸಸ್ !

ಎಚ್ ಡಿ ರೇವಣ್ಣ ರಾಜಕೀಯ ಭವಿಷ್ಯಕ್ಕೆ ಕಂಟಕವಾಗುವ ಸಾಧ್ಯತೆ !

ಮತಾಂತರಕ್ಕೆ ಬ್ರೇಕ್ ಹಾಕಿದ ಕೇಂದ್ರ ಸರ್ಕಾರ, ಹೊಸ ನೀತಿ ಜಾರಿಗೆ !