ಕುಮಾರಸ್ವಾಮಿಯವರಿಂದ ಮೋದಿಯವರಿಗೆ ಖಡಕ್ ಪ್ರಶ್ನೆ ! ಕುಮಾರಸ್ವಾಮಿಯವರ ಪ್ರಶ್ನೆಗೆ ಕನ್ನಡಿಗರ ಬೆಂಬಲವಿದೆಯೇ?

ಮೊನ್ನೆ ತಾನೇ ಕೇಂದ್ರ ಗೃಹಮಂತ್ರಿಯಾದ ಅಮಿತ್ ಶಾ ಅವರು ಒಂದು ದೇಶ ಒಂದು ಭಾಷೆ ಎಂದು ಹೇಳಿಕೆ ನೀಡಿದ್ದರು. ಇದಕ್ಕೆ ದಕ್ಷಿಣ ಭಾರತದ ಹಲವು ರಾಜ್ಯಗಳಿಂದ ವಿರೋಧ ವ್ಯಕ್ತಪಡಿಸಿದ್ದಾರೆ. ಹಿಂದಿ ದಿವಸ್ ಆಚರಿಸುತ್ತಿರುವ ಕೇಂದ್ರ ಸರ್ಕಾರರ ವಿರುದ್ಧ ತರಾಟೆ ತಗೆದುಕೊಂಡಿರುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹಿಂದಿಯ ಹಾಗೆ ಅಧಿಕೃತ ಭಾಷೆಯಾಗಿರುವ ಕನ್ನಡ ಭಾಷಾ ದಿನವನ್ನು ಎಂದು ಆಚರಿಸುತ್ತೀರಿ ಎಂದು ಪ್ರಶ್ನಿಸಿದ್ದಾರೆ.

ಹಿಂದಿ ದಿವಸ್ ಆಚರಣೆಯಂದು ಪ್ರಧಾನಿ ಮೋದಿ ಹಾಗೂ ಗೃಹ ಸಚಿವ ಅಮಿತ್ ಷಾ ಶುಭ ಹಾರೈಸಿದ್ದರು. ಅಷ್ಟೇ ಅಲ್ಲದೆ ಅಮಿತ್ ಶಾ ಹಿಂದಿಯನ್ನು ದೇಶದ ಏಕ ಭಾಷೆಯಾಗಿ ಜಾರಿಗೆ ತರುವ ಪ್ರಸ್ತಾವವನ್ನು ಟ್ವೀಟ್ ನಲ್ಲಿ ಮಾಡಿದ್ದಾರೆ. ಈ ಹಿನ್ನಲೆಯಲ್ಲಿ ಈಗ ಕೇಂದ್ರದ ನಡೆ ವಿರುದ್ಧ ಟ್ವೀಟ್ ಮಾಡಿರುವ ಕುಮಾರಸ್ವಾಮಿ 'ಇಂದು ದೇಶದಾದ್ಯಂತ ಕೇಂದ್ರ ಸರ್ಕಾರ 'ಹಿಂದಿ ದಿವಸ್' ಆಚರಿಸುತ್ತಿದೆ. ಸಂವಿಧಾನದಲ್ಲಿ ಹಿಂದಿಯೊಂದಿಗೆ ಅಧಿಕೃತ ಭಾಷೆ ಎನಿಸಿಕೊಂಡಿರುವ ಕನ್ನಡದ ಭಾಷಾ ದಿವಸವನ್ನು ದೇಶಾದ್ಯಂತ ಯಾವಾಗ ಆಚರಿಸುತ್ತೀರಿ ನರೇಂದ್ರ ಮೋದಿಯವರೇ? ಕನ್ನಡಿಗರೂ ಈ ಒಕ್ಕೂಟ ವ್ಯವಸ್ಥೆಯ ಭಾಗವಾಗಿದ್ದಾರೆ ನೆನಪಿರಲಿ.' ಎಂದು ಕಿಡಿ ಕಾರಿದ್ದಾರೆ.

1949 ಸೆಪ್ಟೆಂಬರ್ 14 ರಂದು ಸಂವಿಧಾನ ಸಭೆ ಹಿಂದಿಯನ್ನು ದೇವನಾಗರಿ ಲಿಪಿ ಮೂಲಕ ಅಧಿಕೃತ ಭಾಷೆ ಎಂದು ಪರಿಗಣಿಸಿತು, ಅಂದಿನಿಂದ ಹಿಂದಿ ದಿವಸ್ ಆಚರಣೆಯನ್ನು ಕೇಂದ್ರ ಸರ್ಕಾರ ಆಚರಿಸಿಕೊಂಡು ಬರುತ್ತಿದೆ.

9 ಜನ ಲಿಂಗಾಯತ ನೌಕಕರಿಗೆ ಬಿಜೆಪಿ ಕಛೇರಿಯಿಂದ ಗೇಟ್ ಪಾಸ್!!

ಲಿಂಗಾಯತರು ಬಿಜೆಪಿ ಕಛೇರಿ ಬಳಿ ಬರಬೇಡಿ - BSY ಬಳಿಕ ಕಾರ್ಯಕರ್ತರಿಗೆ ಶಾಕ್ ಕೊಟ್ಟ ನಳೀನ್ ಕುಮಾರ್ ಕಟೀಲ್..?

ನಿಗಮ ಮಂಡಳಿಗೆ ಅಧ್ಯಕ್ಷರುಗಳ ನೇಮಕ - ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊ'ಡೆದ್ರಾ ಯಡಿಯೂರಪ್ಪ.??

ಬಿಜೆಪಿಗೆ ಸೇರ್ಪಡೆಯಾದ ಕುಸ್ತಿಪಟು ಯೋಗೇಶ್ವರ್ ದತ್, ಹರಿಯಾಣದಲ್ಲಿ ಮತ್ತೆ ಬಿಜೆಪಿ ?