ಪ್ರ'ಧಾನಿ ಮೋ'ದಿಯವರಿಗೆ ಮತ್ತು ಮುಖ್ಯ'ಮಂತ್ರಿ ಯಡಿ'ಯೂರಪ್ಪನವರಿಗೆ ಕಾಂಗ್ರೆಸ್ ಪಕ್ಷ'ದಿಂದ ಪ್ರಶ್ನೆಗಳ ಸುರಿ'ಮಳೆ!

ರಾಜ್ಯದಲ್ಲಿ ಮಳೆ ಪ್ರವಾಹದಿಂದ ಸುಮಾರು ೧೦ ಜಿಲ್ಲೆಗಳಿಗಿಂತ ಹೆಚ್ಚು ಹಾನಿಗೊಳಗಾಗಿವೆ ಆದರೆ ಪ್ರಧಾನಿ ಮೋದಿಯವರು ಬಂದು ಸಮಸ್ಯೆ ಆಲಿಸದಿರುವುದು ದುರಂತ ಎಂದು ಕಾಂಗ್ರೆಸ್ ಹೇಳಿದೆ. ಬಿಜೆಪಿ ಗೆ ಕರ್ನಾಟಕದಿಂದ ೨೫ ಸೀಟು ಸಂಸದರನ್ನು ಕೊಟ್ಟಿದೆ ಆದರೆ ಇದರಿಂದ ರಾಜ್ಯಕ್ಕೆ ಮೋದಿಯವರು ಕೃತಜ್ಞತೆ ಸಲ್ಲಿಸುವ ಕೆಲಸ ಮಾಡಿಲ್ಲ.

೧.ಪ್ರಧಾನಿ ನರೇಂದ್ರ ಮೋದಿ ಅವರು ಪ್ರವಾಹ ಪರಿಸ್ಥಿತಿ ವೀಕ್ಷಣೆಗೆ ಯಾಕೆ ಬಂದಿಲ್ಲ?

೨. ಅಮಿತ್ ಶಾ ಮತ್ತು ನಿರ್ಮಲ ಸೀತಾರಾಮನ್ ಹಾಗೂ ಕೇಂದ್ರ ತಂಡದ ಪ್ರವಾಹ ವೀಕ್ಷಣೆಯ ಫಲ ಏನು?

3. ಈ ಭೀಕರ ಪ್ರವಾಹ ವಿಕೋಪವನ್ನು "ರಾಷ್ಟ್ರೀಯ ವಿಪತ್ತು" ಎಂದು ಯಾಕೆ ಘೋಷಿಸಲಿಲ್ಲ?

4. ಇಷ್ಟು ದೊಡ್ಡ ಮಟ್ಟದ ನಷ್ಟ ಸಂಭವಿಸಿದರೂ ಯಡಿಯೂರಪ್ಪನವರ ಬೇಡಿಕೆಯಂತೆ ಕೇಂದ್ರವು ₹5,000 ಕೋಟಿ ಮಧ್ಯಂತರ ಪರಿಹಾರ ಬಿಡುಗಡೆ ಯಾಕೆ ಮಾಡಲಿಲ್ಲ?

೫. ಪ್ರಧಾನಿಯವರು ಪ್ರವಾಹ ಪರಿಸ್ಥಿತಿ ಬಗ್ಗೆ ಚರ್ಚಿಸಲು ರಾಜ್ಯ ಸರ್ಕಾರಕ್ಕೆ ಅವಕಾಶ ನೀಡದೆ ಕರ್ನಾಟಕವನ್ನು ಅವಮಾನಿಸುತ್ತಿರುವುದೇಕೆ?

೬. ತಕ್ಷಣ ಪರಿಹಾರ ಬಿಡುಗಡೆಗಾಗಿ ಕೇಂದ್ರದ ಮೇಲೆ ರಾಜ್ಯ ಸರ್ಕಾರ ಒತ್ತಡ ಹೇರುತ್ತಿಲ್ಲ ಏಕೆ?

೭. ರಾಜ್ಯ ಸರ್ಕಾರವು ಪ್ರಧಾನಿ ಬಳಿ ಪರಿಹಾರ ಕೇಳಲು ಸರ್ವಪಕ್ಷಗಳ ನಾಯಕರು, ಕೆಲ ಸಂತ್ರಸ್ತರು, ರೈತ ಮುಖಂಡರ ನಿಯೋಗವನ್ನು ಯಾಕೆ ಕರೆದೊಯ್ಯುತ್ತಿಲ್ಲ?

೮. 25 ಮಂದಿ ಬಿಜೆಪಿ ಸಂಸದರು ತಮ್ಮ ಕರ್ತವ್ಯ ಮರೆತು ಕಣ್ಮರೆಯಾಗಿರುವುದೇಕೆ?

೯. ಸಂತ್ರಸ್ತರು ಪ್ರತಿಭಟಿಸುವರೆಂದು ಹೆದರಿ ಬೆಳಗಾವಿಯಲ್ಲಿ ಅಧಿವೇಶನ ಮಾಡದಿರುವುದು ಪಲಾಯನವಲ್ಲವೇ?

೧೦. ನಷ್ಟ ₹35,160ಕೋಟಿ ಎಂದು ಅಂದಾಜಿಸಿ ರಾಜ್ಯವು ₹1500ಕೋಟಿ ಬಿಡುಗಡೆ ಮಾಡಿರುವುದು ಸಂತ್ರಸ್ತರಿಗೆ ಮಾಡಿರುವ ಅನ್ಯಾಯವಲ್ಲವೆ?

9 ಜನ ಲಿಂಗಾಯತ ನೌಕಕರಿಗೆ ಬಿಜೆಪಿ ಕಛೇರಿಯಿಂದ ಗೇಟ್ ಪಾಸ್!!

ಲಿಂಗಾಯತರು ಬಿಜೆಪಿ ಕಛೇರಿ ಬಳಿ ಬರಬೇಡಿ - BSY ಬಳಿಕ ಕಾರ್ಯಕರ್ತರಿಗೆ ಶಾಕ್ ಕೊಟ್ಟ ನಳೀನ್ ಕುಮಾರ್ ಕಟೀಲ್..?

ನಿಗಮ ಮಂಡಳಿಗೆ ಅಧ್ಯಕ್ಷರುಗಳ ನೇಮಕ - ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊ'ಡೆದ್ರಾ ಯಡಿಯೂರಪ್ಪ.??

ಬಿಜೆಪಿಗೆ ಸೇರ್ಪಡೆಯಾದ ಕುಸ್ತಿಪಟು ಯೋಗೇಶ್ವರ್ ದತ್, ಹರಿಯಾಣದಲ್ಲಿ ಮತ್ತೆ ಬಿಜೆಪಿ ?