ಲಿಂಗಾಯತರು ಬಿಜೆಪಿ ಕಛೇರಿ ಬಳಿ ಬರಬೇಡಿ - BSY ಬಳಿಕ ಕಾರ್ಯಕರ್ತರಿಗೆ ಶಾಕ್ ಕೊಟ್ಟ ನಳೀನ್ ಕುಮಾರ್ ಕಟೀಲ್..?

ಬಿಜೆಪಿ ರಾಜ್ಯಾಧ್ಯಕ್ಷರಾಗಿ ಕಟೀಲ್ ಅವರು ವಹಿಸಿಕೊಂಡ ನಂತರ ಬಿಜೆಪಿಯಲ್ಲಿ ಎಲ್ಲವು ಸರಿಯಿಲ್ಲ ಎಂಬ ಸುದ್ದಿ ಹೊರಬಿದ್ದಿದೆ. ಕಾರ್ಯಕರ್ತರು ಉತ್ಸಾಹವನ್ನು ಕಳೆದುಕೊಂಡಿದ್ದಾರೆ ಮತ್ತು ಸೋಶಿಯಲ್ ಮೀಡಿಯಾದಲ್ಲಿ ಕಟೀಲು ಅವರ ಭಾಷಣ ಅಥವಾ ಫೋಟೋ ಯಾರು ಹಾಕುತ್ತಿಲ್ಲ. ಕಟೀಲ್ ಅವರು ಅಧ್ಯಕ್ಷ ಗದ್ದುಗೆಗೆ ಏರಿದ ಮೇಲೆ ತಮಗೆ ಬೇಕಾದವರನ್ನೇ ಮಾತ್ರ ನೇಮಕ ಮಾಡುತ್ತಿದ್ದಾರೆ, ಹೀಗೆ ಮುಂದುವರೆದರೆ ಬಿಜೆಪಿ ಕಥೆ ಜೆಡಿಎಸ್ ಪಕ್ಷಕ್ಕಿಂತ ಹೀನಾಯ ಸ್ಥಿತಿ ಆದರೂ ಆಶ್ಚರ್ಯವಿಲ್ಲ ಎಂದು ಸೋಶಿಯಲ್ ಮೀಡಿಯಾದಲ್ಲಿ ಅಪ್ಡೇಟ್ ಹಾಕಿದ್ದಾರೆ. ರಾಜ್ಯ ಬಿಜೆಪಿ ಕಚೇರಿಯಲ್ಲಿ ಜಾತಿ ರಾಜಕೀಯ ನಡಿಯುತ್ತಿರುವ ಆರೋಪ ಕೇಳಿಬರುತ್ತಿದ್ದು, ಸಿಎಂ ಯಡಿಯೂರಪ್ಪ ಅಷ್ಟೇ ಅಲ್ಲ ಸಿಎಂ ಬೆಂಬಲಿಗರನ್ನೂ ಕೂಡ ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಬಿಜೆಪಿ ಕಾರ್ಯಕರ್ತರೊಬ್ಬರು ಆರೋಪಿಸಿದ್ದಾರೆ.

ಬಿಜೆಪಿ ಕಚೇರಿಯಲ್ಲಿ ತಾರತಮ್ಯ ಮಾಡುತ್ತೀರಿ, ಲಿಂಗಾಯರು ಎಂದು ಬೇಧ ಮಾಡಿದರೆ ನಿಜವಾಗಿಯೂ ಮುಂದಿನ ಚುವಾವಣೆಯಲ್ಲಿ 40%ದಷ್ಟು ಕೂಡ ಮತ ಬೀಳಲ್ಲ. ಬಿಎಸ್‍ವೈ ಪಕ್ಷ ಕಟ್ಟಿದ್ದಾಗ ಬಿಜೆಪಿ ಸ್ಥಿತಿ ಹೇಗಿತ್ತು ಈಗ ಹೇಗಿದೆ ಎನ್ನುವುದನ್ನು ಮರೆಯಬೇಡಿ. ನೀವು ಹೀಗೆ ತಾರತಮ್ಯ ಮಾಡುತ್ತಿದ್ದರೆ ಬಜೆಪಿ ವಿರೋಧ ಪಕ್ಷದಲ್ಲಿ ಕೂರುವಷ್ಟು ಸೀಟು ಗೆಲ್ಲಲ್ಲ ಎಂದು ಬಿಜೆಪಿ ಕಾರ್ಯಕರ್ತ ನಂಜುಂಡಸ್ವಾಮಿಯವರು ಹೇಳಿದ್ದಾರೆ. .

ಬಿಎಸ್‍ವೈ ಅಧ್ಯಕ್ಷರಾಗಿದ್ದಾಗ ಪಕ್ಷದಲ್ಲಿ ಎಲ್ಲಾ ಜಾತಿಯ ಸಿಬ್ಬಂದಿ ಕೂಡ ಕೆಲಸ ಮಾಡುತ್ತಿದ್ದರು. ಆದರೆ ಈಗ ಅವರು ಬರಬೇಡಿ, ನೀವು ಬರಬೇಡಿ ಎಂದು ಹೇಳುತ್ತಿದ್ದಾರೆ. ಹಾಗಾದರೆ ನಮ್ಮನ್ನು ಪಕ್ಷಕ್ಕೆ ಸದಸ್ಯರಾಗಿ ಮಾಡಿಕೊಂಡಿದ್ದು ಯಾಕೆ? ಎಂದು ಪ್ರಶ್ನಿಸಿ ಕಿಡಿಕಾರಿದ್ದಾರೆ. ಜೊತೆಗೆ ಕರ್ನಾಟಕದಲ್ಲಿ ಏನು ನಡೆಯುತ್ತಿದೆ ಎಂದು ಪ್ರಧಾನಿ ಮೋದಿ ಹಾಗೂ ಸಚಿವ ಅಮಿತ್ ಶಾ ಅವರಿಗೆ ಏನು ತಿಳಿಯುತ್ತೆ? ಯಡಿಯೂರಪ್ಪ ಇಲ್ಲವಾದರೆ ರಾಜ್ಯದಲ್ಲಿ ಬಿಜೆಪಿ ಸರ್ವನಾಶವಾಗಿಬಿಡುತ್ತೆ. ಉತ್ತರ ಕರ್ನಾಟಕ ನೆರೆ ಪರಿಹಾರ ಕೊಡಬೇಕು ಎಂದು ಬಿಎಸ್‍ವೈ ಮುನ್ನುಗ್ಗುತ್ತಿದ್ದಾರೆ. ಆದರೆ ಈಗ ಅಂಥವರಿಗೆ ತೊಂದರೆ ಕೊಡುತ್ತಿದ್ದಾರೆ ಎಂದು ತಮ್ಮ ಪಕ್ಷದ ವಿರುದ್ಧವೇ ಬಿಜೆಪಿ ಕಾರ್ಯಕರ್ತ ಕಿಡಿಕಾರಿದರು.

ಯಡಿಯೂರಪ್ಪನವರ ಆಪ್ತರೆಂದು ರಾಜ್ಯ ಬಿಜೆಪಿ ಕಚೇರಿಯಲ್ಲಿ ಕೆಲವರಿಗೆ ಗೇಟ್ ಪಾಸ್ ನೀಡಲಾಗಿದೆ. ಹಾಗೆಯೇ ಲಿಂಗಾಯತರು ಬಿಜೆಪಿ ಕಚೇರಿಗೆ ಬರಬೇಡಿ ಎನ್ನುತ್ತಿದ್ದಾರೆ ಎಂದು ಬಿಜೆಪಿ ಕಾರ್ಯಕರ್ತ ಹಾಗೂ ಸಿಎಂ ಬೆಂಬಲಿಗ ನಂಜುಂಡಸ್ವಾಮಿ ಆರೋಪಿಸಿದ್ದಾರೆ. ಬಹಿರಂಗವಾಗಿ ವೀಡಿಯೋದಲ್ಲಿ ಈ ಬಗ್ಗೆ ಪ್ರಸ್ತಾಪಿಸಿರುವ ನಂಜುಂಡಸ್ವಾಮಿ, ಸಿಎಂ ಬೆಂಬಲಿಗರು ಎಂಬ ಕಾರಣಕ್ಕೆ ತಮ್ಮ ಪಕ್ಷದಲ್ಲಿ ಭೇದಭಾವ ಮಾಡಲಾಗುತ್ತಿದೆ ಎಂದು ಹೇಳಿಕೊಂಡರು.

ಲಿಂಗಾಯತರು, ಯಡಿಯೂರಪ್ಪನವರು ಆಪ್ತರೆಂದು ನಮಗೆ ಬಿಜೆಪಿ ಕಚೇರಿಯಲ್ಲಿ ಪ್ರವೇಶ ನೀಡುತ್ತಿಲ್ಲ ಎಂದು ನಂಜುಂಡಸ್ವಾಮಿ ಬಹಿರಂಗ ಆರೋಪಿ ಮಾಡುತ್ತಿದ್ದಾರೆ. ಈ ಹಿಂದೆ ಬಿಜೆಪಿ ಕಚೇರಿಯಲ್ಲಿ ಅಡುಗೆ ಕೆಲಸ ನಿರ್ವಹಿಸುತ್ತಿದ್ದ ಕೆಲಸಗಾರರನ್ನು ಕೂಡ ಕೆಲಸದಿಂದ ತೆಗೆದಿದ್ದಾರೆ ಎಂಬ ಆರೋಪ ಕೂಡ ಕೇಳಿಬಂದಿತ್ತು. ಇದೀಗ ಬಿಜೆಪಿ ಕಚೇರಿಯಲ್ಲಿ ತಾರತಮ್ಯ ಮಾಡಲಾಗುತ್ತಿದೆ ಎಂದು ನಂಜುಂಡಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.

14 ವರ್ಷದಿಂದ ಬಿಜೆಪಿ ಕಾರ್ಯಕರ್ತನಾಗಿ ನಾನು ಕೆಲಸ ಮಾಡಿದ್ದು ಸಾರ್ಥಕವಾಯ್ತು ಎಂದುಕೊಂಡಿದ್ದೆ, ಆದ್ರೆ ಅದು ಸಾರ್ಥಕವಾಗಿಲ್ಲ. ಬಿಜೆಪಿ ನಮ್ಮ ಹೆತ್ತ ತಾಯಿ ಎಂದು ತಿಳಿದುಕೊಂಡಿದ್ದೆವು. ಆದ್ರೆ ಬಿಜೆಪಿಯಲ್ಲಿ ಯಡಿಯೂರಪ್ಪ ಅವರು ಅಧ್ಯಕ್ಷರಾಗಿದ್ದಾಗ ಪಕ್ಷವನ್ನು ಬೆಳೆಸಿದರು. ಆದರೆ ಪ್ರಸ್ತುತವಾಗಿ ಬಂದಿರುವ ಅಧ್ಯಕ್ಷರು ಲಿಂಗಾಯತರನ್ನ ಟಾರ್ಗೆಟ್ ಮಾಡಿಕೊಂಡು ಸುಮಾರು 5ರಿಂದ 6 ಮಂದಿ ಕೆಲಸಗಾರರನ್ನು ತೆಗೆದು ಹಾಕಿದ್ದಾರೆ. ಲಿಂಗಾಯತರು ಬಿಜೆಪಿ ಕಚೇರಿಗೆ ಬರಬೇಡಿ ಎನ್ನುತ್ತಾರೆ. 14 ವರ್ಷ ನಾವು ದುಡಿದ ಶ್ರಮ ಎಲ್ಲಿ ಹೋಯ್ತು? ಬಿಎಸ್‍ವೈ ಬೆಂಬಲಿಗರು ಎಂದು ಟಾರ್ಗೆಟ್ ಮಾಡಲಾಗುತ್ತಿದೆ. ಏಕಾಏಕಿ ಕೆಲಸದಿಂದ ಕೆಲಸಗಾರರನ್ನು ತೆಗೆದು ಹಾಕಿದರೆ ಅವರು ಹಾಗೂ ಅವರ ಕುಟುಂಬದ ಸ್ಥಿತಿ ಏನು ಎಂದು ಪ್ರಶ್ನಿಸಿದ್ದಾರೆ. ಈ ಸುದ್ದಿ ಮಾಧ್ಯಮಗಳಲ್ಲಿ ಬಾರಿ ವೈರಲ್ ಆಗಿದೆ.

9 ಜನ ಲಿಂಗಾಯತ ನೌಕಕರಿಗೆ ಬಿಜೆಪಿ ಕಛೇರಿಯಿಂದ ಗೇಟ್ ಪಾಸ್!!

ನಿಗಮ ಮಂಡಳಿಗೆ ಅಧ್ಯಕ್ಷರುಗಳ ನೇಮಕ - ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊ'ಡೆದ್ರಾ ಯಡಿಯೂರಪ್ಪ.??

ಬಿಜೆಪಿಗೆ ಸೇರ್ಪಡೆಯಾದ ಕುಸ್ತಿಪಟು ಯೋಗೇಶ್ವರ್ ದತ್, ಹರಿಯಾಣದಲ್ಲಿ ಮತ್ತೆ ಬಿಜೆಪಿ ?

ರಮೇಶ್ ಕುಮಾರ್ ಬಿಜೆಪಿಯವರ ಬಳಿ ದುಡ್ಡು ತಗೊಂಡು ನನ್ನ ವಿರುದ್ಧ ಕೆಲಸ ಮಾಡಿದ್ದಾನೆ.ನಾನು ನಿನ್ನ ನೋಡ್ಕೋತೀನಿ - ಸಿದ್ದುಗೆ ಗೆ ಗುದ್ದು- ಕೆಎಚ್ಎಂ